ಬೆಂಗಳೂರು:- ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಪ್ಡೇಟ್ ಕೊಟ್ಟಿದ್ದಾರೆ.
ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಆರಾಮವಾಗಿ ಇದ್ದಾರೆ. ಸ್ವಲ್ಪ ಆಯಾಸ ಇತ್ತು. ಅದಕ್ಕೆ ಚೆಕಪ್ ಮಾಡಿದ್ರು. ಈಗ ಸರಿ ಹೋಗಿದ್ದಾರೆ. ಚೆನ್ನಾಗಿ ಮಾತನಾಡಿದರು. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಹೇಳಿದರು.



