ಬೆಳಗಾವಿ: ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಅವರನ್ನು ಸಮರ್ಥನೆ ಮಾಡಿಕೊಂಡರು. ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್ ಖಾನ್ ʻಮುಸ್ಲಿಂʼ ಸ್ಪೀಕರ್‌ಗೆ ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು.
Advertisement
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ತೇವೆ ಎಂದರಲ್ಲದೇ ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.