34,863 ಸರ್ಕಾರಿ ಹುದ್ದೆ ಖಾಲಿ, ಕಾಲ ಮಿತಿಯಲ್ಲಿ ಭರ್ತಿ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ!

0
Spread the love

ಬೆಂಗಳೂರು:- ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಸರ್ಕಾರಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಚಿವರಾದ ಜಿ.ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್, ಡಾ.ಶರಣ ಪ್ರಕಾಶ ಪಾಟೀಲ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದರು.

ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here