ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ: ಬೊಮ್ಮಾಯಿ

0
A pro-development budget by a developed India
Spread the love

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ.

Advertisement

ಫೆವಿಕಾಲ್ ಕಿತ್ತಿಕೊಳ್ಳಲು ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಎಲ್ಲವನ್ನು ಇವರಿಬ್ಬರೇ ಮಾಡಿದರೆ ನಮ್ಮದೇನು ಪಾತ್ರ ಅಂತ ಗೃಹ ಸಚಿವ ಪರಮೇಶ್ವರ್ ಗೆ ಬಂದಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಹೀಗಾಗಿ ಈ ಸರ್ಕಾರ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಕಾಂಗ್ರೆಸ್ ನವರು ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ ಜೀರೋ, ಸಾಮಾಜಿಕ ನ್ಯಾಯಾಲಯದಲ್ಲಿ ಜೀರೋ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಜೀರೋ. ಹಣಕಾಸಿನ ದಿವಾಳಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದೆ ಎಂದರು.


Spread the love

LEAVE A REPLY

Please enter your comment!
Please enter your name here