ಹಾಸನ: ಗೌರಿ ಗಣೇಶ ಹಬ್ಬದ ಪ್ರಯಕ್ತ ಸರ್ಕಾರ ಪ್ರದೇಶಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆ ಮಾಡಿದ್ದಾರೆ. ಹಾಸನದ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ, ಹೊಂಗದಹಳ್ಳದಿಂದ 24.01 ಟಿಎಂಸಿ ನೀರನ್ನು ಹರಿಸುವ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.
Advertisement
ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆ ಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್ಗಳಿಗೂ ಚಾಲನೆ ನೀಡಲಾಗಿಯಿತು.