ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ: ಏನದು?

0
Spread the love

ಬೆಂಗಳೂರು:- ಯುಗಾದಿಗೂ ಮುನ್ನಾ ದಿನ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ ಸಲ್ಲಿಸಿದರು.

Advertisement

ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಮನವಿ ಮಾಡಿದ್ದಾರೆ.

ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಮೊದಲಿಗರು. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ ಎಂದು ವಿವರಿಸಿದ್ದಾರೆ. ಅಪ್ರತಿಮ ನಾಯಕಿಯ ಸಮಾಧಿಯು ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರತಿನಿಧಿಸುವ ಮಹಾನ್ ಶಕ್ತಿ ಸ್ಥಳವಾಗಿದೆ. 1824ರಲ್ಲಿ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿ ವಿರುದ್ಧ ರಾಣಿ ಚೆನ್ನಮ್ಮ ಕೆಚ್ಚೆದೆಯಿಂದ ಹೋರಾಡಿದ ಕಾರಣ ಇಂದಿಗೂ ಈ ಸಮಾಧಿ ತಾಣ ಧೈರ್ಯ ಮತ್ತು ತ್ಯಾಗದ ಸಂಕೇತವಾಗಿ ನಿಂತಿದೆ ಎಂದಿದ್ದಾರೆ.

ಹೀಗಾಗಿ, ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ ಮಾಡುತ್ತೇನೆ. ಈ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿನ ಅವರ ಹೋರಾಟವನ್ನು ಸ್ಮರಿಸಿ, ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here