ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ನಾಮಿನೇಷನ್ ಪ್ರಕ್ರಿಯೆ ನಿನ್ನೆ ಮುಕ್ತಾಯಗೊಂಡಿದೆ. ಇದರ ಮದ್ಯೆ ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ರೂ ಬಂಡಾಯ ಬಿಸಿ ಜೋರಾಗಿತ್ತು. ಆದ್ದರಿಂದ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ನಾಮಪತ್ರ ವಾಪಸ್ ಪಡೆದುಕೊಳ್ಳುವಂತೆ ಮನವಿಯನ್ನು ಮಾಡಿದರು.
ಹೌದು ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂ ಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕರೆದುಕೊಂಡು ಬಂದರು.
ಇದೇ ವೇಳೆ, ಸಿಎಂ ಸಿದ್ದರಾಮಯ್ಯ ನಾಮಪತ್ರ ವಾಪಸು ಪಡೆಯುವಂತೆ ಮನವೊಲಿಕೆ ಮಾಡಿದರು. ಟಿಕೆಟ್ ನೀಡದೇ ಇರುವುದಕ್ಕೆ ಅಸಮಾಧಾನ ಹೊರಹಾಕಿದ ಖಾದ್ರಿ, ಸಿಎಂ ಮನವೊಲಿಕೆಗೆ ಒಪ್ಪಿ ನಾಮಪತ್ರ ಹಿಂಪಡೆಯುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.