HomePolitics Newsಮೆಲ್ಲ ಮೆಲ್ಲನೇ ಎನ್ನುತ್ತಲೇ ರಾಮೇಶ್ವರನ ನೆನೆದ ಸಿಎಂ ಸಿದ್ದರಾಮಯ್ಯ!

ಮೆಲ್ಲ ಮೆಲ್ಲನೇ ಎನ್ನುತ್ತಲೇ ರಾಮೇಶ್ವರನ ನೆನೆದ ಸಿಎಂ ಸಿದ್ದರಾಮಯ್ಯ!

For Dai;y Updates Join Our whatsapp Group

Spread the love

ಮಂಡ್ಯ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದ್ದು, ಮೆಲ್ಲ ಮೆಲ್ಲನೇ ಎನ್ನುತ್ತಲೇ ರಾಮೇಶ್ವರನನ್ನು ನೆನೆದಿದ್ದಾರೆ.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು. ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದರು. ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು. ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ. ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!