ಮಂಡ್ಯ: ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಹೌದು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದ್ದಾರೆ.
ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು, ಇದೀಗ ಅಭಿಜಿತ್ ಶುಭ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆದಿದೆ. ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್‌ಎಸ್ ಭರ್ತಿಯಾಗಿದೆ.
ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು KRS ಡ್ಯಾಂ ಗೆ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಡ್ಯಾಂ ನಿರ್ಮಾಣ ಆದಾಗಿನಿಂದ ಜೂನ್ ತಿಂಗಳಲ್ಲಿ ಇದುವರೆಗೂ ತುಂಬಿರಲಿಲ್ಲ. ಆದರೆ 93 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಈಗ ಕೆಆರ್‌ಎಸ್ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.