ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿದ್ರೆ ಮಾಡೋದು ಬಿಟ್ಟು ನೌಕರರ ಸಮಸ್ಯೆ ಬಗೆಹರಿಸಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಸಾರಿಗೆ ಮುಷ್ಕರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,
ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯಬೇಡಿ. ನೌಕರರ ನ್ಯಾಯಯುತ ಬೇಡಿಕೆಗಳಿಗೆ ನಮ್ಮ ಬೆಂಬಲ ಇದೆ. ಸಿಎಂ ಸಿದ್ದರಾಮಯ್ಯ ನಿದ್ರೆ ಮಾಡೋದು ಬಿಟ್ಟು ನೌಕರರ ಸಭೆ ಮಾಡಿ ಸಮಸ್ಯೆ ಪರಿಹಾರ ಮಾಡಿ. ನಿಮ್ಮಿಂದ ಸಮಸ್ಯೆ ಪರಿಹಾರ ಮಾಡಲು ಆಗದೇ ಹೋದ್ರೆ ಅಧಿಕಾರ ಬಿಟ್ಟು ಹೋಗಿ ಅಂತ ಆಗ್ರಹ ಮಾಡಿದ್ರು.
ಇನ್ನೂ ಕೋವಿಡ್ ವೇಳೆ ಬಿಜೆಪಿ ಅವರು ಹೈಕ್ ಮಾಡಿಲ್ಲ ಅಂತ ಹೇಳ್ತಾರೆ. ಸಿದ್ದರಾಮಯ್ಯ ಅವರೇ ಬೇರೆ ರಾಜ್ಯಗಳಲ್ಲಿ ಸಂಬಳವೇ ಕೊಟ್ಟಿರಲಿಲ್ಲ. ನಾವು ಸಂಬಳ ಕೊಟ್ಟಿದ್ವಿ. ಕೋವಿಡ್ ಕಾರಣ ಹೈಕ್ ಮಾತ್ರ ಕೊಟ್ಟಿರಲಿಲ್ಲ. ಇಡೀ ವಿಶ್ವದಲ್ಲಿ ಯಾರು ಹೈಕ್ ಕೊಟ್ಟಿರಲಿಲ್ಲ. ಅದನ್ನ ಇಟ್ಟುಕೊಂಡು ನಮ್ಮ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಕುಟುಕಿದ್ದಾರೆ.