ಜೂನ್ 3ರಂದು ಸಿಎಂ ಸಿದ್ದರಾಮಯ್ಯರಿಂದ ಜಿ-ಎನ್‌ಟಿಟಿಎಫ್ ಉದ್ಘಾಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಹುಬ್ಬಳ್ಳಿ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಜಿ-ಎನ್‌ಟಿಟಿಎಫ್ ಆವರಣದಲ್ಲಿ ದಿ. ಗದಗ ಕೋ-ಆಪ್ ಇಂಡಸ್ಟ್ರಿಯಲ್ ಎಸ್ಟೇಟ್ ಲಿ ಸಹಯೋಗದಲ್ಲಿ ಆರಂಭಗೊಂಡಿರುವ ಜಿ-ಎನ್‌ಟಿಟಿಎಫ್‌ನ ಉದ್ಘಾಟನಾ ಸಮಾರಂಭ ಜೂನ್ 3ರಂದು ಮಧ್ಯಾಹ್ನ 3ಕ್ಕೆ ನೆರವೇರಲಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಎನ್‌ಟಿಟಿಎಫ್ ಎಂಡಿ ರವಿ ಟೆನ್ನೆಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಅತಿಥಿಗಳಾಗಿ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ನರಗುಂದ ಶಾಸಕ ಸಿ.ಸಿ. ಪಾಟೀಲ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಪಾಲ್ಗೊಳ್ಳುವರು ಎಂದು ಜಿಸಿಐಇ ಅಧ್ಯಕ್ಷ ಆರ್.ಆರ್. ಓದುಗೌಡರ, ಉಪಾಧ್ಯಕ್ಷ ಪಿ.ಬಿ. ದಂಡಾವತಿಮಠ, ಜಿ-ಎನ್‌ಟಿಟಿಎಫ್‌ನ ಚೇರಮನ್ ಕೃಷ್ಣಗೌಡ ಎಚ್.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here