ಗದಗ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ

0
Spread the love

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗದಗ ಜಿಲ್ಲೆಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗದ ಮೂಲಕ ಗದಗ ನಗರಕ್ಕೆ ಆಗಮಿಸಲಿದ್ದಾರೆ.

Advertisement

ಮಧ್ಯಾಹ್ನ 12:15ಕ್ಕೆ ಜವಳಗಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಘಟಕವನ್ನು ವೀಕ್ಷಿಸುವ ಸಿಎಂ, ಬಳಿಕ 12:35ಕ್ಕೆ ಗದಗ SP ಕಚೇರಿಯ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕನಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವದಲ್ಲಿ ಪಾಲ್ಗೊಂಡು, ಸಂಘ ಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ನಂತರ ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮಗಳ ನಂತರ, ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 3:30ಕ್ಕೆ ಗದಗದಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಮಾಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here