ಬೀದರ್/ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 11ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೀದರ್‌ನಿಂದ ಕಲಬುರಗಿಗೆ ಪ್ರಯಾಣಿಸಲಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರ ದೇವಸ್ಥಾನವನ್ನು ಅವರು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ.
ದಿನದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ, ಅವರು ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ.



