HomeBelgaumವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ೧೯೨೪ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮ ಗಾಂಧೀಜಿಯವರ ನೂತನ ಪ್ರತಿಮೆಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಎಚ್.ಸಿ. ಮಹದೇವಪ್ಪ, ಲಕ್ಷಿö್ಮÃ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್. ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಶಾಸಕ ಆರ್.ವಿ. ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿ.ಪಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

ಜಗತ್ತಿನ ಗಣ್ಯರಾದ ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ, ನೊಬೆಲ್ ವಿಜೇತರಾದ ರೋಮಾ ರೋಲಾ, ಬರ್ಮಾ ದೇಶದ ಆಂಗ್ ಸಾನ್ ಸೂಕಿ ಅವರು ಬಾಪೂ ಬಗ್ಗೆ ಮಾತನಾಡಿರುವ ಭಾವಚಿತ್ರಗಳು,  ಗಾಂಧೀಜಿಯವರನ್ನು ರಾಷ್ಟçಪಿತ ಎಂದು ಕರೆದ ನೇತಾಜಿ ಸುಭಾಸ್ ಚಂದ್ರ ಬೋಸ್ ಹಾಗೂ ಮಹಾತ್ಮ ಗಾಂಧೀಜಿಯವರು ಹರಿಪುರ ಕಾಂಗ್ರೆಸ್ ಅಧಿವೇಶನದಲ್ಲಿ ಒಟ್ಟಿಗೆ ಕುಳಿತಿರುವ ಫೋಟೋ, ಗಾಂಧೀಜಿಯವರನ್ನು ಮಹಾತ್ಮ ಎಂದು ಕರೆದ ರವೀಂದ್ರನಾಥ ಠಾಗೋರ್ ಅವರೊಂದಿಗೆ ಮಹಾತ್ಮ ಗಾಂಧೀಜಿಯವರ ಫೋಟೋ, ಮಹಾತ್ಮ ಗಾಂಧೀ ಹಾಗೂ ಕಸ್ತೂರಬಾ ದಂಪತಿಗಳ ತಾರುಣ್ಯದ ಭಾವಚಿತ್ರಗಳನ್ನು ವೀರ ಸೌಧದಲ್ಲಿ ಕಾಣಬಹುದಾಗಿದೆ.

೧೯೩೦ರ ಐತಿಹಾಸಿಕ ಉಪ್ಪಿನ ಸತ್ಯಾಗ್ರಹ,  ಕುಷ್ಠರೋಗ ಭಯ ಹೋಗಲಾಡಿಸಲು ಪರ್ಚುರೇ ಶಾಸ್ತಿçÃಗಳಿಗೆ ಚಿಕಿತ್ಸೆ ನೀಡುತ್ತಿರುವ ಬಾಪೂ, ೧೯೪೬ರ ಮುಂಬಯಿ ಕಾಂಗ್ರೆಸ್ ಅಧಿವೇಶನದ ಭಾವಚಿತ್ರ, ಮೋಹನ್‌ದಾಸ್‌ರಿಂದ ಮಹಾತ್ಮವರೆಗೆ ಬೆಳವಣಿಗೆಯ ಪ್ರಮುಖ ಘಟ್ಟಗಳು, ಗಾಂಧೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನದ ಭಾವಚಿತ್ರ, ಲಂಡನ್ ದುಂಡು ಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಹೊರಟ ಸಂದರ್ಭದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಬೆಳಗಾವಿ ಟಿಳಕವಾಡಿಯ ವೀರ ಸೌಧದಲ್ಲಿ ಅಳವಡಿಸಲಾಗಿರುವ ಹೊಸ ಫೋಟೋ ಗ್ಯಾಲರಿಯಲ್ಲಿ  ಒಟ್ಟು ೪೦ ಎಲ್‌ಇಡಿ ಫೋಟೊಗಳಿವೆ. ಇವುಗಳಲ್ಲಿ ೧೯೨೪ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಸಂಬAಧಿಸಿದ ೧೭  ಭಾವಚಿತ್ರಗಳನ್ನು ಎಲ್‌ಇಡಿ ಆಧರಿಸಿ ಪ್ರದರ್ಶನಕ್ಕೆ ಸಿದ್ಧಗೊಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!