ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ಜಾತ್ರೆಗಾಗಿ ಸುಮಾರು 200ರಿಂದ 250 ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಶುಕ್ರವಾರ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ಜಾತ್ರೆ ನಡೆಯಿತು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಸಾದ ತಯಾರಿಕೆಗೆ ಅಗತ್ಯವಾದ ಗ್ಯಾಸ್ ಸಿಲಿಂಡರ್‌ಗಳನ್ನು ಸಿಎಂ ಸಿದ್ದರಾಮಯ್ಯ ಅವರ ಪ್ರಭಾವ ಬಳಸಿ ಒದಗಿಸಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಮೈಸೂರು ಹೋಟೆಲ್ ಸಂಘದ ಅಧ್ಯಕ್ಷ ನಾರಾಯಣಗೌಡ ಮಾಹಿತಿ ನೀಡಿ, ಸಿಎಂ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧ್ಯವಾಗುತ್ತದೆ. ಜಾತ್ರೆಗೆ ಎರಡು ದಿನಗಳ ಮೊದಲು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಿಲಿಂಡರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಪ್ರತಿದಿನ ಸುಮಾರು 4,000 ವಾಣಿಜ್ಯ ಸಿಲಿಂಡರ್‌ಗಳ ಅಗತ್ಯವಿದ್ದು, ಹೋಟೆಲ್ ಉದ್ಯಮಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಷ್ಟು ಸಾಧ್ಯವಾಗದಿದ್ದರೂ ಕನಿಷ್ಠ 700ರಿಂದ 800 ಸಿಲಿಂಡರ್‌ಗಳು ಹೋಟೆಲ್‌ಗಳಿಗೆ ಲಭ್ಯವಾಗುವಂತೆ ಸಿಎಂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.



