ಬೆಂಗಳೂರು: ದೇಶದಾದ್ಯಾಂತ ಸಿಲಿಂಡರ್ ಕೊರತೆಯ ಸಮಸ್ಯೆ ಮುಂದುವರೆದಿದ್ದು, ಕರ್ನಾಟಕದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ದಿನನಿತ್ಯ ಪರದಾಡುವ ಸ್ಥಿತಿಗೆ ತಲುಪಿದ್ದಾರೆ.
ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಬಳಕೆಗಾಗಿ ಸಿಲಿಂಡರ್ ಲಭ್ಯವಿಲ್ಲದ ಕಾರಣ ಉದ್ಯಮಗಳು ಮುಚ್ಚುವ ಪರಿಸ್ಥಿತಿ ಎದುರಾಗುತ್ತಿದೆ.
ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪೆಟ್ರೋಲ್ ಮತ್ತು ಎಲ್‌ಪಿಜಿ ವಿಭಾಗದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪೂಣಿಯಾ ಅವರಿಗೆ ಬರೆದ ಪತ್ರದಲ್ಲಿ, ರಾಜ್ಯಕ್ಕೆ ತುರ್ತು ಅಗತ್ಯವಿರುವ ಸಿಲಿಂಡರ್ ಸಂಖ್ಯೆ 50,000 ಎಂದು ಉಲ್ಲೇಖಿಸಲಾಗಿದೆ. “ಈಗಾಗಲೇ ದಿನಕ್ಕೆ 1,000 ಸಿಲಿಂಡರ್ ಮಾತ್ರ ಪೂರೈಸಲು ಸಾಧ್ಯವಾಗಿದೆ. ಹೀಗಾಗಿ ಹೋಟೆಲ್ಗಳು, ಪಿಜಿ ಅಂಗಡಿಗಳು, ಅಡುಗೆ ತಯಾರಿಕಾ ಸಂಸ್ಥೆಗಳು ಮುಚ್ಚುವ ಪರಿಸ್ಥಿತಿ ಎದುರಾಗುತ್ತಿದೆ,” ಎಂದು ಸಿಎಂ ತಿಳಿಸಿದ್ದಾರೆ.
ವಿದ್ಯಾರ್ಥಿಗಳು, ಐಟಿ ನೌಕರರು, ರೈತರು, ಡೈರಿ ಉತ್ಪಾದಕರು ಸೇರಿದಂತೆ ಅನೇಕ ಜನರು ಆತಿಥ್ಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ. ಭಾರತಕ್ಕೆ ಬಂದ 2 ಟ್ಯಾಂಕರ್ಗಳ LPG ಅನ್ನು ಸಮರ್ಪಕವಾಗಿ ಹಂಚಿಕೆ ಮಾಡಿ. ರಾಜ್ಯದ ಲಭ್ಯತೆ ಸ್ಥಿರಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



