ರಾಜ್ಯದಲ್ಲಿ ಸಂಭವಿಸುತ್ತಿರುವ ಗಲಾಟೆಗೆ ಸಿಎಂ ಸಿದ್ದರಾಮಯ್ಯ ದುರಹಂಕಾರವೇ ಕಾರಣ: ಶೋಭಾ ಕರಂದ್ಲಾಜೆ

0
Spread the love

ಶಿವಮೊಗ್ಗ: ರಾಜ್ಯದಲ್ಲಿ ಸಂಭವಿಸುತ್ತಿರುವ ಗಲಾಟೆಗೆ ಸಿಎಂ ಸಿದ್ದರಾಮಯ್ಯ ದುರಹಂಕಾರವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ.

Advertisement

ಆದರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಗಲಾಟೆಗಳಿಗೆ ನಮ್ಮ ಮೇಲೆ ಆರೋಪ ಮಾಡುತ್ತೀರಾ? ರಾಜ್ಯದಲ್ಲಿ ಸಂಭವಿಸುತ್ತಿರುವ ಗಲಾಟೆಗೆ ಸಿಎಂ ಸಿದ್ದರಾಮಯ್ಯ ದುರಹಂಕಾರವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಇನ್ನೂ ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣುತ್ತಿಲ್ಲ. ಕೇರಳದ ಆನೆಯಿಂದ ಸಾವನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here