ವಿಜಯಪುರ:- ಭರ್ತಿಯಾದ ಆಲಮಟ್ಟಿ ಜಲಾಶಯಕ್ಕೆ ನಾಳೆ CM ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.
ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಭಾರೀ ಮಳೆಯಿಂದ ಭರ್ತಿಯಾಗಿದೆ.
ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್ಎಎಲ್ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್ಸ್ಟ್ರಿಪ್ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.
ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದು ಖುಷಿಯ ವಿಚಾರ.