ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿಎಂ ಚಾಲನೆ!

0
Spread the love

ಬೆಂಗಳೂರು:- ಕರ್ನಾಟಕದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಹಾಗೂ ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಸಿ.ಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾಹಿತಿ ನೀಡಿದ್ದಾರೆ.

Advertisement

ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಮೂಲಕ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಂತಾಗಿದೆ. ಇನ್ನೂ ಕಳೆದ ಬಜೆಟ್ ನಲ್ಲಿ ಪತ್ರಕರ್ತರ ಅಭ್ಯುದಯಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಒಂದಿಷ್ಟು ಯೋಜನೆಗಳನ್ನು ಘೋಷಿಸಿದ್ದರು. ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದರು. ಅದರಂತೆ ನಾಳೆ ಅಂದ್ರೆ ಜುಲೈ 1 ರಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ಕೊಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here