HomeKarnataka Newsಸಾಲ ಮನ್ನಾ ಕುರಿತು ಸಿಎಂ ಪರಿಶೀಲನೆ; ಬೆಳೆ ಹಾನಿ ವರದಿ ಬಳಿಕ ನಿರ್ಧಾರ - ಲಕ್ಷ್ಮಣ್...

ಸಾಲ ಮನ್ನಾ ಕುರಿತು ಸಿಎಂ ಪರಿಶೀಲನೆ; ಬೆಳೆ ಹಾನಿ ವರದಿ ಬಳಿಕ ನಿರ್ಧಾರ – ಲಕ್ಷ್ಮಣ್ ಸವದಿ

For Dai;y Updates Join Our whatsapp Group

ಚಿಕ್ಕೋಡಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಮುಂಗಾರು ಬೆಳೆಗಳಿಗೆ ಹಾನಿಯಾಗುವ ಆತಂಕ ಎದುರಾಗಿದ್ದು, ರೈತರು ಸಾಲ ಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿ, ಸಾಲ ಮನ್ನಾ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿರುವುದನ್ನು ಸವದಿ ಉಲ್ಲೇಖಿಸಿದರು.

“ನಾಳೆ ಬೆಳಿಗ್ಗೆ 10.30ಕ್ಕೆ ಬೆಳಗಾವಿ ವಿಭಾಗ ಮಟ್ಟದ ಪರಿಶೀಲನಾ ಸಭೆ ನಡೆಯಲಿದೆ. ಸಭೆಯಲ್ಲಿ ಬೆಳೆ ಹಾನಿಯ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುವುದು. ಅದರ ಆಧಾರದ ಮೇಲೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಕಾರಣ ನದಿಗೆ ನೀರಿನ ಹರಿವು ವಿಳಂಬವಾಗಿದ್ದು, ಅದರ ಪರಿಣಾಮ ಹಲ್ಯಾಳ ಏತ ನೀರಾವರಿ ಯೋಜನೆಯನ್ನು ಸುಮಾರು 38 ದಿನ ತಡವಾಗಿ ಆರಂಭಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೆರೆ ಮತ್ತು ಬಾಂದಾರಗಳನ್ನು ತುಂಬಿಸುವುದಕ್ಕಿಂತ, ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳನ್ನು ಉಳಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಹಲ್ಯಾಳ ಹಾಗೂ ಕರಿಮಸೂತಿ ಏತ ನೀರಾವರಿ ಯೋಜನೆಗಳ ಮೂಲಕ ರೈತರ ಬೆಳೆಗಳಿಗೆ ನೀರು ಪೂರೈಸಲಾಗುವುದು. ನಂತರದ ಹಂತದಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಸವದಿ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img