HomeIndia Newsರೈತರಿಗೆ ಬಂಪರ್ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌:‌ 75,000 ರೂ. ವರೆಗಿನ ಬೆಳೆ ಸಾಲ...

ರೈತರಿಗೆ ಬಂಪರ್ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌:‌ 75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ

For Dai;y Updates Join Our whatsapp Group

ಚೆನ್ನೈ: ತಮಿಳುನಾಡು ಸಿಎಂ ವಿಜಯ್ ರೈತ ಕಲ್ಯಾಣದ ಭಾಗವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ₹75,000 ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಹೊಸ ಯೋಜನೆಯ ಪ್ರಕಾರ 2025ರ ಮೇ 1ರಿಂದ 2026ರ ಫೆಬ್ರವರಿ 28ರ ನಡುವೆ ಪಡೆದ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ. ₹75,000ಕ್ಕಿಂತ ಹೆಚ್ಚು ಸಾಲ ಹೊಂದಿರುವ ರೈತರಿಗೆ ₹35,000 ವರೆಗೆ ಸಾಲ ಮನ್ನಾ ನೀಡಲಾಗುತ್ತದೆ.

ಈ ಯೋಜನೆಯಿಂದ ಒಟ್ಟು 14.43 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಇವರಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತರು ಸೇರಿದ್ದಾರೆ ಎಂದು ಸರ್ಕಾರ ವಿವರಿಸಿದೆ. ಸಂಪೂರ್ಣ ಸಾಲ ಮನ್ನಾ ಪಡೆಯುವ ರೈತರ ಸಂಖ್ಯೆ 6.22 ಲಕ್ಷಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಈ ನಿರ್ಧಾರದಿಂದ ಸರ್ಕಾರಕ್ಕೆ ಸುಮಾರು ₹5,932 ಕೋಟಿ ಆರ್ಥಿಕ ಹೊರೆ ಉಂಟಾಗಲಿದೆ. ಯೋಜನೆ ಅನುಷ್ಠಾನದ ಹಣಕಾಸು ನಿರ್ವಹಣೆಯನ್ನು RBI ಮಾರ್ಗಸೂಚಿಗಳ ಪ್ರಕಾರ 45–60 ದಿನಗಳಲ್ಲಿ ಪೂರ್ಣಗೊಳಿಸುವ ಯೋಜನೆ ಸರ್ಕಾರದದು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img