ಚಿಕ್ಕಬಳ್ಳಾಪುರ:– ಚಾಮುಂಡಿ ಕುಂಕುಮ ಹಚ್ಚಿಕೊಳ್ಳದ ಸಿಎಂ, ಮುಸ್ಲಿಂ ಕಾರ್ಯಕ್ರಮದಲ್ಲಿ ಅವರ ಟೋಪಿ ಹಾಕಿ ಸಂಭ್ರಮಿಸುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ವೇಳೆ ದೇಶದ ಯಾವುದೇ ಭಾಗದಲ್ಲೂ ಹಿಂದೂಗಳು ಅಶಾಂತಿ ಉಂಟುಮಾಡಿಲ್ಲ. ಆದ್ರೆ ರಾಜ್ಯದ ಮದ್ದೂರು, ನಾಗಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದರು.
ಇಸ್ಲಾಂ ಧರ್ಮದಲ್ಲಿ ನಿಜವಾದ ಸೋದರತ್ವದ ಮೌಲ್ಯಗಳು ಕಾಣಿಸುತ್ತಿಲ್ಲ. ಈಗ ಕರ್ನಾಟಕದಲ್ಲಿ ಸಾಬ್ರ ಸರ್ಕಾರವೇ ಆಡಳಿತ ನಡೆಸುತ್ತಿದೆ. ನಮ್ಮ ಮುಖ್ಯಮಂತ್ರಿ ದಸರಾ ವೇಳೆ ಚಾಮುಂಡೇಶ್ವರಿಯ ಕುಂಕುಮ ಹಚ್ಚಿಕೊಳ್ಳುವುದಿಲ್ಲ, ಆದರೆ ಮುಸ್ಲಿಂ ಕಾರ್ಯಕ್ರಮಗಳಲ್ಲಿ ಟೋಪಿ ಧರಿಸಿ ಸಂತೋಷ ವ್ಯಕ್ತಪಡಿಸುತ್ತಾರೆ ಎಂದು ಟೀಕಿಸಿದರು.
ಇನ್ನೂ ವಕ್ಫ್ ಆಸ್ತಿಗಳ ವಿಷಯ ಪ್ರಸ್ತಾಪಿಸಿ ದೇಶದಲ್ಲಿ ಮೂರು ಪಾಕಿಸ್ತಾನಗಳಷ್ಟು ವಕ್ಫ್ ಆಸ್ತಿಗಳು ಇವೆ. ಮೋದಿ ಸರ್ಕಾರ ವಕ್ಫ್ ಕಾನೂನು ತರದಿದ್ದರೆ ಹಿಂದೂಗಳ ದೇವಾಲಯಗಳ ಜಮೀನುಗಳು ಉಳಿಯುತ್ತಿರಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.