ಚಾಮರಾಜನಗರ: ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಗೋಷಣೆ ಮಾಡಿದ್ದೆವು. ಆಗ ನಾನು ಉಪ ಮುಖ್ಯಮಂತ್ರಿಯಾಗಿದ್ದೆ.
Advertisement
ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನು ಘೋಷಣೆ ಮಾಡಿದ್ದು. ನಾನು ಏನಿಲ್ಲ ಅಂದರೂ 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು. ಅತ್ಯಂತ ಉತ್ಸಾಹದಿಂದ ನಾನು ಶಾಲೆಯನ್ನು ಉದ್ಘಾಟನೆ ಮಾಡಿದ್ದೇನೆ. ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಈ ಚಾಮರಾಜನಗರ ಎಂದು ಸಿಎಂ ಬಣ್ಣಿಸಿದ್ದಾರೆ.