ಮಂಡ್ಯ:-ಸಕ್ಕರೆನಾಡು ಮಂಡ್ಯಕ್ಕೆ ಇಂದು ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿದೆ.
Advertisement
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿರುವ ಬೆಂಬಲಿಗ ವರುಣ ವಿಧಾನಸಭಾ ಕ್ಷೇತ್ರದ ಮುಖಂಡ ಶಿವರಾಮ್ ಅವರ ಪೆಟ್ರೋಲ್ ಬಂಕ್ ಉದ್ಘಾಟಿಸಲು ಬಂದ ವೇಳೆ ಸಿಎಂ ಸಿದ್ದರಾಮಯ್ಯಗೆ ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.
ಬಳಿಕ ನೂತನ ಪೆಟ್ರೋಲ್ ಬಂಕ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು. ಸಿಎಂಗೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ ಮತ್ತಿತರರ ಸಾಥ್ ಕೊಟ್ಟಿದ್ದಾರೆ.