ಧಾರವಾಡ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್‌ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣದ ಹಿನ್ನೆಲೆ:-
ಹಗರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.