HomeKarnataka NewsKarnataka Weather Tomorrow: ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಚಳಿ ಅಬ್ಬರ; ನಾಳೆಯ ಹವಾಮಾನ ಹೀಗಿದೆ!

Karnataka Weather Tomorrow: ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಚಳಿ ಅಬ್ಬರ; ನಾಳೆಯ ಹವಾಮಾನ ಹೀಗಿದೆ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದ ಹಲವೆಡೆ ನಾಳೆಯೂ ಶೀತಗಾಳಿ ಮುಂದುವರಿಯಲಿದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹಾಗೂ ಸಾಧಾರಣ ಚಳಿಯ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮಳೆ ಬರುವ ಯಾವುದೇ ಮುನ್ಸೂಚನೆ ಇಲ್ಲ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ ಎರಡೂ ಇರಲಿದೆ. ಬೆಳಗಿನ ಸಮಯದಲ್ಲಿ ತಂಪು ಹೆಚ್ಚಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ನಾಳೆ ಸಾಮಾನ್ಯವಾಗಿ ಒಣ ಹವೆ ಕಂಡುಬರಲಿದ್ದು, ರಾತ್ರಿ ಹಾಗೂ ಮುಂಜಾನೆ ವೇಳೆ ಚಳಿ ಅನುಭವವಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ನಾಳೆ ಬಿಸಿಲಿನ ಜೊತೆಗೆ ಒಣ ಹವಾಮಾನ ಇರಲಿದೆ.

ಮಳೆ ಬಗ್ಗೆ ಯಾವುದೇ ಎಚ್ಚರಿಕೆ ಇಲ್ಲ. ತುಮಕೂರು, ದಾವಣಗೆರೆ, ಚಿತ್ರದುರ್ಗದಲ್ಲಿಯೂ ಇದೇ ರೀತಿಯ ವಾತಾವರಣ ಕಂಡುಬರಲಿದ್ದು, ಧಾರವಾಡ, ಹಾವೇರಿ, ಗದಗದಲ್ಲಿ ಚಳಿ ಕೊಂಚ ಹೆಚ್ಚಾಗುವ ನಿರೀಕ್ಷೆ ಇದೆ. ವಿಜಯಪುರ, ಬಾಗಲಕೋಟೆಯಲ್ಲಿ ಒಣ ಹಾಗೂ ಚಳಿಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ಒಣಹವೆ ಕಂಡುಬರಲಿದ್ದು, ಬೆಳಿಗ್ಗೆ ಹಾಗೂ ರಾತ್ರಿ ಸಮಯದಲ್ಲಿ ಮಾತ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!