ಉತ್ತರ ಕನ್ನಡ: ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.
Advertisement
ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ.
ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ ಎನ್ನಲಾಗಿದೆ.