ಇ-ಆಸ್ತಿ, ಕಾವೇರಿ ತಂತ್ರಾಂಶ ಸಂಯೋಜನೆ

0
Collector calls on public to take advantage of e-property combination
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೊಜನೆ ಮಾಡಲಾಗಿದೆ. ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ದಿನಾಂಕ 05-10-2016ರಿಂದ ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ದಿನಾಂಕ 18-07-2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

Advertisement

ಈ ಮೇಲೆ ಕಾಣಿಸಿದ ಆಸ್ತಿಗಳನ್ನು ಹೊರತುಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ (ತಂತ್ರಾಂಶ)ವನ್ನು ರೂಪಿಸಿದ್ದು ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ 29-01-2020ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ.

ನಗರಾಭಿವೃದ್ಧಿ ಇಲಾಖೆಯು ಗದಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಗದಗ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿನಾಂಕ 23-09-2024ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶದ ಮೂಲಕ ಆದೇಶಿಸಲಾಗಿದೆ. ದಿನಾಂಕ 7-10-2024ರಿಂದ ಗದಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.

ಈ ಎಲ್ಲ ಪ್ರಮುಖ ಕಾರಣಗಳಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಹಲವು ಉಪಯೋಗಗಳಿವೆ. ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು, ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು ಸಾಧ್ಯವಾಗಲಿದೆ.


Spread the love

LEAVE A REPLY

Please enter your comment!
Please enter your name here