12 ದಿನಗಳ ಕಾಲ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಗಾಜಿಯಾಬಾದ್ನ ಕಾಲೇಜು ವಿದ್ಯಾರ್ಥಿನಿ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್ ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್ನ ಭೋಜ್ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ.
ಬಳಿಕ ಕುಟುಂಬದವರು ಎಸ್ಎಸ್ಪಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.
ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.
ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.