ಕಾರು-ಜೀಪ್ ನಡುವೆ ಡಿಕ್ಕಿ: ದತ್ತಪೀಠ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್!

0
Spread the love

ಚಿಕ್ಕಮಗಳೂರು:- ಕಾರು-ಜೀಪ್ ನಡುವೆ ಡಿಕ್ಕಿ ಸಂಭವಿಸಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡಿದ ಘಟನೆ ಪಶ್ಚಿಮ ಘಟ್ಟ ತಪ್ಪಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಜರುಗಿದೆ.

Advertisement

ಅಪಘಾತದಿಂದಾಗಿ ರಸ್ತೆಯಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗಿ ಪ್ರವಾಸಿಗರು ಪರದಾಡುವಂತಾಗಿತ್ತು. ವೀಕ್ ಎಂಡ್ ಹಿನ್ನೆಲೆ ಶನಿವಾರ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು. ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಇದರ ನಡುವೆ ಕಾರು-ಜೀಪ್ ಡಿಕ್ಕಿಯಿಂದ ಮತ್ತಷ್ಟು ಸಮಸ್ಯೆ ಉಂಟಾಗಿತ್ತು. ಅಪಘಾತದಿಂದ ಕಾರಿನಲ್ಲಿದ್ದವರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಹನ ದಟ್ಟಣೆ ಸರಿಪಡಿಸಲು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಹಾಗೂ ಪ್ರವಾಸಿಗರು ಹರಸಾಹಸ ಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here