ಕಾರು-ಅಪರಿಚಿತ ವಾಹನದ ನಡುವೆ ಡಿಕ್ಕಿ: 6 ಯಾತ್ರಾರ್ಥಿಗಳು ಸಾವು – ಮೂವರಿಗೆ ಗಾಯ

0
Spread the love

ಜೈಪುರ್: ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ನಡೆದಿದೆ.  ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30ರ ವೇಳೆಗೆ ಈ ಅಪಘಾತ ನಡೆದಿದೆ. ಯಾತ್ರಿಕರು ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಎಂದು ತಿಳಿದು ಬಂದಿದೆ. ಅವರೆಲ್ಲ ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದರು.

ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ಡಿಕ್ಕಿಯಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದೇವೆ ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here