ಬಾಗಲಕೋಟೆ:- ಕಂಟೇನರ್ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿಯಲ್ಲಿ ಜರುಗಿದೆ.
Advertisement
ಡಿಕ್ಕಿ ರಭಸಕ್ಕೆ 8 ರಿಂದ 10 ಜನ ಪ್ರಯಾಣಿಸುತ್ತಿದ್ದ ಕ್ರೂಸರ್ ಪಲ್ಟಿ ಹೊಡೆದಿದೆ. ಘಟನೆಯಿಂದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಬೇವೂರು ಗ್ರಾಮದಿಂದ ಗೋವಿನಕೊಪ್ಪಕ್ಕೆ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.