ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಬೈಕ್ ನಡುವೆ ನಡೆದ ಈ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳಾಗಿದ್ದು,
Advertisement
ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.