ಟಿಪ್ಪರ್ & ಲಾರಿ ಮಧ್ಯೆ ಡಿಕ್ಕಿ: ತಪ್ಪಿದ ದುರಂತ, ಕೆಲಕಾಲ ಟ್ರಾಫಿಕ್ ಜಾಮ್!

0
Spread the love

ಗದಗ:- ಟಿಪ್ಪರ್ ವಾಹನವು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಗದಗ ಜಿಲ್ಲೆ ಮುಂಡರಗಿಯ ಕೊಪ್ಪಳ ಕ್ರಾಸ್ ಬಳಿ ಜರುಗಿದೆ.

Advertisement

ಮೇವುಂಡಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಗಾಡಿಯ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಕೊಪ್ಪಳ ಕಡೆಗೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆ ಬಳಿಕ ಟಿಪ್ಪರ್ ಬಿಟ್ಟು ಚಾಲಕ ಪರಾರಿ ಆಗಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here