ಶಾಲಾ ವಾಹನ& KSRTC ಬಸ್ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

0
Spread the love

ರಾಯಚೂರು: ಶಾಲಾ ವಾಹನ ಮತ್ತು ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

Advertisement

ಖಾಸಗಿ ಶಾಲೆಯ ಬಸ್‌ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್‌ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್‌ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ.

ರಿಮ್ಸ್ ಆಸ್ಪತ್ರೆಗೆ ಎಸ್‌ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಿಮ್ಸ್ ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಎರಡು ಬಸ್‌ಗಳ ನಡುವೆ ಅಪಘಾತದಿಂದಾಗಿ ಸಿಂಧನೂರು- ರಾಯಚೂರು ಮಾರ್ಗದ ರಸ್ತೆ ಕೆಲಕಾಲ ಬಂದ್ ಆಗಿತ್ತು. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here