ಮಂಡ್ಯ: ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಐಗಳಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ 10 ಜನ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
Advertisement
ಮೊದಲು ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಳವಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಮಾಹಿತಿ ಕಲೆ ಹಾಕ್ತಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.