HomeWorld Newsಎರಡು ಯುದ್ಧ ವಿಮಾನಗಳ ಡಿಕ್ಕಿ: ಅಮೆರಿಕ ಸೇನಾ ನೆಲೆಯಲ್ಲಿ ತಪ್ಪಿದ ದೊಡ್ಡ ದುರಂತ!

ಎರಡು ಯುದ್ಧ ವಿಮಾನಗಳ ಡಿಕ್ಕಿ: ಅಮೆರಿಕ ಸೇನಾ ನೆಲೆಯಲ್ಲಿ ತಪ್ಪಿದ ದೊಡ್ಡ ದುರಂತ!

For Dai;y Updates Join Our whatsapp Group

Spread the love

ಇಡಾಹೊ: ಅಮೆರಿಕದ ಪಶ್ಚಿಮ ಇಡಾಹೊದಲ್ಲಿರುವ ಮೌಂಟೇನ್ ಹೋಮ್ ವಾಯುಪಡೆ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ಯುಎಸ್ ನೌಕಾಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲೇ ಭೀಕರವಾಗಿ ಡಿಕ್ಕಿ ಹೊಡೆದಿವೆ.

ಅಪಘಾತಕ್ಕೀಡಾದ ವಿಮಾನಗಳನ್ನು ನೌಕಾಪಡೆಯ ಅತ್ಯಾಧುನಿಕ ‘ಇಎ-18ಜಿ ಗ್ರೋಲರ್ಸ್’ ಯುದ್ಧ ವಿಮಾನಗಳು ಎಂದು ಗುರುತಿಸಲಾಗಿದೆ. ಅತಿ ವೇಗದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಎರಡೂ ವಿಮಾನಗಳಲ್ಲಿದ್ದ ನಾಲ್ವರು ಸಿಬ್ಬಂದಿ ತಕ್ಷಣವೇ ಸುರಕ್ಷಿತವಾಗಿ ಹೊರಜಿಗಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಸ್ಥಿರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್, ಮಿಲಿಟರಿ ನೆಲೆಯಲ್ಲಿದ್ದ ಇತರ ಸಿಬ್ಬಂದಿ ಅಥವಾ ಸಾರ್ವಜನಿಕರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯ ಬಳಿಕ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಭೀಕರ ವೈಮಾನಿಕ ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಯುಎಸ್ ಸೇನಾ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!