ಟಾಲಿವುಡ್‌ನ ‘ರೌಡಿ ಬಾಯ್’ ವಿಜಯ್ ದೇವರಕೊಂಡ ಮತ್ತು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ವಿವಾಹವಾದರು. ಮದುವೆಯ ಬಳಿಕ ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಚಿತ್ರರಂಗದ ಗಣ್ಯರಿಗಾಗಿ ಅದ್ಧೂರಿ ಆರತಕ್ಷತೆ ಆಯೋಜಿಸಲಾಗಿತ್ತು.
ಈ ಸಂಭ್ರಮದ ನಡುವೆ ಪುಟ್ಟ ಅಭಿಮಾನಿಯೊಬ್ಬಳು ಕೇಳಿದ ಪ್ರಶ್ನೆ ಮತ್ತು ಅದಕ್ಕೆ ವಿಜಯ್ ದೇವರಕೊಂಡ ನೀಡಿದ ಉತ್ತರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ ಎಂಬ ಕಾರಣಕ್ಕೆ ಪುಟ್ಟ ಬಾಲಕಿಯೊಬ್ಬಳು ವಿಡಿಯೋ ಮೂಲಕ, “ನಾನು ನಿಮ್ಮ ಫ್ಯಾನ್ ಅಲ್ವಾ? ನಮಗೇನು? ನನ್ನನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುದ್ದಾಗಿ ಪ್ರಶ್ನಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಅದು ವಿಜಯ್ ದೇವರಕೊಂಡ ಗಮನಕ್ಕೂ ಬಂದಿದೆ.



