ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ; ಪೋಷಕರು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್

0
Spread the love

ಬೆಂಗಳೂರು: “ಬೆಂಗಳೂರಿನ‌ 15 ಶಾಲೆಗಳಿಗೆ ಬಂದಿರುವ ಬಾಂಬ್‌ ಬೆದರಿಕೆ ಹುಸಿ ಕರೆಯಾಗಿದ್ದು. ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಹುಸಿ ಬಾಂಬ್ ಕರೆ ಪಡೆದಿದ್ದ ನೀವ್ ಅಕಾಡೆಮಿಗೆ ಭೇಟಿ ನೀಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Advertisement

“ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್‌ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೋಲಿಸ್ ಆಯುಕ್ತರು ಈಗಾಗಲೆ ಸುದ್ದಿಗೋಷ್ಠಿ ನಡೆಸಿ ಇದು ಹುಸಿ ಬಾಂಬ್‌ ಬೆದರಿಕೆ ಎಂದು ಮಾಹಿತಿ ನೀಡಿದ್ದಾರೆ. ಪೋಷಕರು ಆತಂಕದಲ್ಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಧೈರ್ಯದಿಂದ ಇರಬೇಕು” ಎಂದರು.

“ಈಗಾಗಲೆ ಬಾಂಬ್‌ ನಿಷ್ಕ್ರಿಯದಳ ಸ್ಥಳ ಪರಿಶೀಲನೆ ನಡೆಸಿದೆ. ಪೊಲೀಸ್‌ ಭದ್ರತೆ ಇರುವ ಕಾರಣ ನಮ್ಮ ಮನೆ ಹತ್ತಿರ ಹೀಗೆ ಆಗುವ ಸಾಧ್ಯತೆ ಕಡಿಮೆ. ಆದರೂ ಇದು ಪ್ರಮುಖ ಪ್ರದೇಶವಾದರಿಂದ ಸ್ವಲ್ಪ ಎಚ್ಚರದಿಂದ ಇರಬೇಕು. ಬೆಂಗಳೂರು ಜನತೆಗೆ ಯಾವ ಆತಂಕ ಬೇಡ ಕೆಲವು ದುಷ್ಕರ್ಮಿಗಳಿಂದ ಈ ಬೆದರಿಕೆ ಕರೆ ಬಂದಿದ್ದು, 24 ಗಂಟೆಯೊಳಗೆ ಆರೋಪಗಳನ್ನು ಪತ್ತೆ ಹಚ್ಚುತ್ತೇವೆ” ಎಂದರು. ಬೆಂಗಳೂರು ಹಬ್ಬ ನಡೆಯುವ ಸಂದರ್ಭದಲ್ಲೆ ಹೀಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಕೇಳಿದಾಗ, “ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ” ಎಂದು ತಿಳಿಸಿದರು.

ಸೈಬರ್‌ ಕ್ರೈಂ ಪೊಲೀಸರಿಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಹೇಳುತ್ತಿರಾ ಎಂದು ಕೇಳಿದಾಗ “ಸೈಬರ್‌ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ತಕ್ಷಣ ಕ್ರಮಕೈಗೊಂಡು ಸಂಬಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ. ನನಗೂ ಫೋನಿನ ಮೂಲಕ ಮಾಹಿತಿ ನೀಡುತ್ತಿದ್ದಾರೆ. ನಮ್ಮ ಮನೆ ಮುಂದೆ ಕೂಡ ಕಾರ್ಯಚರಣೆ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

ಈ ರೀತಿ ಹುಸಿ ಬಾಂಬ್‌ ಕರೆ ಮತ್ತೆ ಮತ್ತೆ ಏಕೆ ಕೇಳಿಬರುತ್ತಿದೆ ಎಂದು ಕೇಳಿದಾಗ, “ಇದು ದಿಕ್ಕು ತಪ್ಪಿಸುವಂತಹ ಕೆಲಸ. ಈಗ ಪರಿಕ್ಷೆ ಸಮಯ ಆದ ಕಾರಣ ಹೀಗಾಗಿರಬಹುದು. ಈ ಹಿಂದೆ ಕೊಡ ವಿಮಾನ ತಡವಾಗಿದೆ ಎಂದು ಈ ರೀತಿ ಕರೆ ಮಾಡಿರುವ ಘಟನೆ ನಡೆದಿತ್ತು. ಕೆಲವೊಮ್ಮೆ 10 ಹುಸಿ ಕರೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಕರೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ” ಎಂದರು.


Spread the love

LEAVE A REPLY

Please enter your comment!
Please enter your name here