ಕಾಮಿಡಿ ಕಿಲಾಡಿಗಳು ಸೀಸನ್ 3 ವಿನ್ನರ್ ಆಗಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ!

0
Spread the love

ಉಡುಪಿ: ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್​ ಆಗಿದ್ದ ರಾಕೇಶ್ ಪೂಜಾರಿ ಅವರು ವಿಧಿವಶರಾಗಿದ್ದಾರೆ. ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ.

Advertisement

ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ.  ಅವರ ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದು ಮತ್ತಷ್ಟು ಶಾಕಿಂಗ್ ಎನಿಸಿದೆ.

ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, ‘ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್​ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.

2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆ ಆದರು ಮತ್ತು ರನ್ನರ್ ಅಪ್ ತಂಡದಲ್ಲಿ  ಅವರು ಇದ್ದರು. ನಂತರದ ಸೀಸನ್​ನಲ್ಲಿ ಅವರು ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here