ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಗದ್ಗುರು ತೋಂಟದಾರ್ಯ ಶಿಕ್ಷಣ ಸಂಸ್ಥೆಯ ತೋಂಟದಾರ್ಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 2024ರ ಶಾಲಾ ಪ್ರಾರಂಭೋತ್ಸವ ಜರುಗಿತು. ಸರಸ್ವತಿ ಹಾಗೂ ಪೂಜ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿsಸಿ, ಶಾಲೆಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರು ಪುಷ್ಪಾರ್ಪಣೆ ಮಾಡಿ, ವಿಭೂತಿ ಹಚ್ಚಿ ಸ್ವಾಗತಿಸಿದರು.
Advertisement
ಈ ಸಂದರ್ಭದಲ್ಲಿ ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ ಮಕ್ಕಳಿಗೆ ಸಿಹಿ ವಿತರಿಸಿದರು. ಎನ್.ವ್ಹಿ. ಗಾಳಿ, ಸುರೇಖಾ ಕುಂಬಾರಗೇರಿಮಠ, ಮಧುಮತಿ ಬಂಡಿವಾಡ, ಕೆ.ಎಂ. ಗೌಡರ, ವಂದನಾ ಮಿಸಾಳ, ಸಂಸ್ಕೃತ ಶಿಕ್ಷಕಿ ವಿಜಯಲಕ್ಷ್ಮಿ ಪಟ್ಟಣಶೆಟ್ಟಿ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.