ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಕಂಡ ಧೀಮಂತ ನಾಯಕ, ಮುತ್ಸದ್ಧಿಯ ರಾಜಕಾರಣಿ ದಿ. ಕೆ.ಚ್. ಪಾಟೀಲ ಜನ್ಮ ಶತಮಾನೋತ್ಸವದ ಪ್ರಾರಂಭೋತ್ಸವವು ಮಾರ್ಚ್ 16ರಂದು ಸಂಜೆ 4 ಗಂಟೆಗೆ ಹುಲಕೋಟಿಯ ಕೆ.ಎಚ್. ಪಾಟೀಲ ವಿದ್ಯಾಮಂದಿರದ ಪ್ರಾಂಗಣದಲ್ಲಿ ನೆರವೇರಲಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಮಾರಂಭ ಉದ್ಘಾಟಿಸಲಿದ್ದಾರೆ. ಶ್ರೇಷ್ಠ ಮಾನವೀಯ ಸೇವೆಗಾಗಿ ನೀಡಲಾಗುವ `ಕೆ.ಎಚ್. ಪಾಟೀಲ ಪ್ರಶಸ್ತಿ’ಯನ್ನು ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ ಅವರಿಗೆ ವಿ.ಪ ಸಭಾಪತಿ ಬಸವರಾಜ ಹೊರಟ್ಟಿ ಪ್ರದಾನ ಮಾಡಲಿದ್ದಾರೆ.
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಭಾಪತಿ ಬಿ.ಎಲ್. ಶಂಕರ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ, ಖನಿಜ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ, ತುಮಕೂರು ಸಂಸದ ಜಿ.ಎಸ್. ಬಸವರಾಜ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಪಾಲ್ಗೊಳ್ಳುವರು.
ಅತಿಥಿಗಳಾಗಿ ಪ್ರಮುಖರಾದ ಪ್ರೊ. ಐ.ಜಿ. ಸನದಿ, ಆರ್.ಎಸ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದ್ದೇವರಮಠ ಪಾಲ್ಗೊಳ್ಳಲಿದ್ದಾರೆ. ದಿ. ಕೆ.ಎಚ್. ಪಾಟೀಲರ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೆ.ಎಚ್. ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್. ಪಾಟೀಲರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಶತಮಾನೋತ್ಸವದ ಅಂಗವಾಗಿ ಕೆ.ಎಚ್. ಪಾಟೀಲ ಕಿಡ್ನಿ ಕೇರ್ ಉದ್ಘಾಟನೆ, ದಿ.ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿಯ ಆಡಳಿತ ಮಂಡಳಿಯ ಕಟ್ಟಡ ಸಂಕೀರ್ಣದ ಭೂಮಿ ಪೂಜೆ, ಹುಲಕೋಟಿಯ ಶ್ರೀ ಮಾರುತಿ ದೇವಸ್ಥಾನದ ಸಮುದಾಯ ಭವನದ ಭೂಮಿ ಪೂಜೆ, ಹುಲಕೋಟಿಯಲ್ಲಿ ನೂತನ ಬಸ್ ನಿಲ್ದಾಣದ ಉದ್ಘಾಟನೆ ಮುಂತಾದ ರಚನಾತ್ಮಕ ಕಾರ್ಯಕ್ರಮಗಳು ನಡೆಯಲಿವೆ.