ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮದ್ಯಾಹ್ನ ಜಿಲ್ಲಾಧಿಕಾರಿಗಳ ಕಚೆರಿ ಸಭಾಂಗಣದಲ್ಲಿ ಬೆಳೆವಿಮೆ ಪರಿಹಾರ, ಬೆಳೆಪರಿಹಾರ, ಮಹದಾಯಿ ಯೋಜನೆ ಅನುಷ್ಠಾನ ಕುರಿತು ಮಹದಾಯಿ ಹೋರಾಟಗಾರರ ಹಾಗೂ ಜಿಲ್ಲೆಯ ರೈತ ಮುಖಂಡರ ಸಭೆ ಜರುಗಿತು.
ಸಭೆಯಲ್ಲಿ ರೈತ ಮುಖಂಡರು ಮಹದಾಯಿ ನಿರಾವರಿ ಯೊಜನೆ ಅನಷ್ಠಾನ, ಹೆಸ್ಕಾಂನಿAದ ನಿರಂತರ ವಿದ್ಯುತ್ ಪೂರೈಕೆ, ಕುಂದುಗೋಳ ಭಾಗದ ರೈತರ ಜಮಿನುಗಳಲ್ಲಿ ಚಿಗರಿ ಹಾವಳಿ, ಬೆಳೆವಿಮೆ ಪರಿಹಾರ, ಮಧ್ಯಂತರ ಬೆಳೆವಿಮೆ ಪರಿಹಾರ, ಉತ್ತರ ಕರ್ನಾಟಕದ ಕೃಷಿ, ನೀರಾವರಿ, ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲು ರೈತ ಮುಖಂಡರಿಗೆ ಸಮಯಾವಕಾಶ ನೀಡಲು ಮನವಿ ಮಾಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಮಹದಾಯಿ ಯೋಜನೆ ಜಾರಿಗೆ ನಾನು ಒಬ್ಬ ರೈತನಾಗಿ, ಹೊರಾಟಗಾರನಾಗಿ ಬದ್ಧನಾಗಿದ್ದೇನೆ. ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಅನುದಾನ ನೀಡಿದ್ದಾರೆ. ಕೆಂದ್ರ ಸಚಿವರೂ ಆಗಿರುವ ನಮ್ಮ ಸಂಸದರೊAದಿಗೆ ರೈತರ ಸಭೆ ಜರುಗಿಸಿ, ಕೇಂದ್ರದ ಸಹಕಾರದಲ್ಲಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸೋಣ ಎಂದರು.
ಜಿಲ್ಲೆಯ ರೈತರಿಗೆ ಮಧ್ಯಂತರ ಬೆಳೆ ಪರಿಹಾರವಾಗಿ ಈಗಾಗಲೇ ಸುಮಾರು ೭೦ ಕೋಟಿ ರೂ. ಬಿಡುಗಡೆ ಆಗಿದೆ.
ಶೀಘ್ರದಲ್ಲಿ ಪೂರ್ಣ ಪ್ರಮಾಣದ ಬೆಳೆವಿಮೆ ಬಿಡುಗಡೆ ಆಗಲಿದೆ. ರಾಜ್ಯ ಸರ್ಕಾರ ಆರಂಭಿಕವಾಗಿ ರೂ. ೨ ಸಾವಿರ ಬೆಳೆ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿದೆ. ಕೇಂದ್ರದಿAದ ಸುಮಾರು ೧೭ ಸಾವಿರ ಕೋಟಿ ರೂ ಪರಿಹಾರ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇದಕ್ಕೆ ರಾಜ್ಯದ ಪಾಲು ಸೇರಿಸಿ, ರೈತರಿಗೆ ಪರಿಹಾರ ಹಣ ನೀಡಲಾಗುವುದು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜನ ಜಾನುವಾರು ಮೇವು, ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಗೋಶಾಲೆ ಪ್ರಾರಂಭವಾಗಿದೆ. ಜಿಲ್ಲೆಯ ೧೪ ಸ್ಥಳಗಳಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸ್ಥಳ ಗುರುತಿಸಲಾಗಿದೆ. ರೈತರಿಗೆ ಬ್ಯಾಂಕ್‌ಗಳಲ್ಲಿ ಆಗುತ್ತಿರುವ ಓಟಿಎಸ್ ಸಮಸ್ಯೆ ಪರಿಹರಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್ ಮೂಲಕ ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲಾಗುವುದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದರೆ, ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ.ಗೋಪಾಲ್ ಬ್ಯಾಕೋಡ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಟಕಾ, ಜೂಜು ಮತ್ತು ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡುವುದನ್ನು ನಿಯಂತ್ರಿಸಲು ಎಲ್ಲ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಿಸಿ, ಚುರುಕುಗೊಳಿಸಲಾಗಿದೆ. ಯಾವುದೇ ಗ್ರಾಮಗಳಲ್ಲಿ ಅಪರಾಧ ಕೃತ್ಯಗಳು, ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಜಿಲ್ಲಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಕೆ.ಸಿ. ಬದ್ರಣ್ಣನವರ, ಕೃಷಿ ಇಲಾಖೆ ಉಪ ನಿರ್ದೇಶಕಿ ಜಯಶ್ರೀ ಹಿರೇಮಠ, ಎಸ್‌ಬಿಐ ವಿಮಾ ಕಂಪನಿಯ ಉಮೇಶ ಕಾಂತಾ, ವಿವಿಧ ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ರೈತ ಮುಖಂಡರಾದ ಶಂಕರ ಅಂಬಲಿ, ಲೋಕನಾಥ ಹೆಬಸೂರ, ಶಿವಣ್ಣ ಹೆಬ್ಬಳ್ಳಿ, ವೀರೇಶ ಸೊಬರದಮಠ, ಭಗವಂತಪ್ಪ ಪಟ್ಟಣದ, ದಿವಟೆ ಗೋಪಾಲ, ರಮೇಶ ಕೊರವಿ, ಬಸವರಾಜ ಜೋಗಪ್ಪನವರ, ಹಣಮಂತ ಬೂದಿಹಾಳ, ರಘುನಾಥ ನಡುವಿನಮನಿ, ಮಹೇಶ್ ಕುಲಕರ್ಣಿ, ಮಾಣಿಕ್ಯಮ್ಮ, ಮಲ್ಲಿಕಾರ್ಜುನ ಬಾಳನಗೌಡರ, ಎ.ಪಿ. ಗುರಿಕಾರ, ಸುಭಾಷಚಂದ್ರಗೌಡ ಪಾಟೀಲ ಸೇರಿದಂತೆ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳ ರೈತ ಪ್ರತಿನಿಧಿಗಳು, ಮಹಿಳಾ ರೈತ ಪ್ರತಿನಿಧಿಗಳು ಭಾಗವಹಿಸಿ, ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಮಹದಾಯಿ ಹಾಗೂ ಉತ್ತರ ಕರ್ನಾಟಕದ ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊAದಿಗೆ ರೈತರ ಸಭೆ ನಡೆಸಲು ಚುನಾವಣಾ ಪೂರ್ವದಲ್ಲಿ ಅಥವಾ ಚುನಾವಣೆ ನಂತರ ಸಮಯ ನಿಗದಿಪಡಿಸಲು ಪ್ರಯತ್ನಿಸುತ್ತೇನೆ ಮತ್ತು ಮುಖ್ಯಮಂತ್ರಿಗಳ ಸಮಯಾವಕಾಶ ನೋಡಿಕೊಂಡು ನಾಳೆಯ ನವಲಗುಂದ ಕಾರ್ಯಕ್ರಮದಲ್ಲಿ ರೈತ ಮುಖಂಡರನ್ನು ಭೇಟಿ ಮಾಡಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕಾರ್ಯಕ್ರಮದಲ್ಲಿ ಸ್ಥಳ ಗುರುತಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಶಾಸಕ ಕೋನರಡ್ಡಿ ತಿಳಿಸಿದರು.