ಧಾರವಾಡ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇನ್ನೂ ಈ ಘಟನೆ ಸಂಬಂಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ಹಿಂದೂಗಳ ತಪ್ಪಿಲ್ಲ. ಇದು ಮುಸ್ಲಿಂರೇ ಉದ್ದೇಶಪೂರ್ವಕವಾಗಿ ಮಾಡಿದ್ದಾರೆ.
Advertisement
ಆದರೆ ಪೊಲೀಸ್ ಇಲಾಖೆ ಸ್ವಲ್ಪ ಜನ ಹಿಂದೂಗಳನ್ನ ಬಂಧಿಸೋದು ಸ್ವಲ್ಪ ಜನ ಮುಸ್ಲಿಂ ಯುವಕರನ್ನ ಬಂಧಿಸೋದು ಮೊದಲು ಬಿಡಬೇಕು. ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ವೈಫಲ್ಯವೇ ಕಾರಣ. ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಮಾಡಿರುವ ಇಂತಹ ಹೇಯ ಕೃತ್ಯಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವ ನಾರಾಯಣಸ್ವಾಮಿ ಕಾರಣ ಎಂದು ಆರೋಪಿಸಿದ್ದಾರೆ.