ವಿದ್ಯಾರ್ಥಿಗಳೊಂದಿಗೆ ಸಂವಹನ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಾಣಿಜ್ಯ ವಿದ್ಯಾರ್ಥಿಗಳಾದ ನೀವು ಸ್ವಂತ ಪ್ರೇರೇಪಣೆಯಿಂದ ಮುನ್ನುಗ್ಗುವ ಪ್ರವೃತ್ತಿ ಬೆಳೆಸಿಕೊಂಡಲ್ಲಿ ಮಾತ್ರ ಮುನ್ನಡೆ ಅಥವಾ ಪ್ರಗತಿ ಸಾಧ್ಯ ಎಂದು ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಉಡುಪಿ ದೇಶಪಾಂಡೆ ಅಭಿಪ್ರಾಯಪಟ್ಟರು.

Advertisement

ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಬಿಂಕದಕಟ್ಟಿಯ ಪ್ರಾಣಿ ಸಂಗ್ರಹಾಲಯದಲ್ಲಿ ಜರುಗಿದ ‘ಪ್ರೇರೇಪಣಾ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಹನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ವಾಣಿಜ್ಯ ವಿದ್ಯಾರ್ಥಿಗಳಾದ ನೀವು ಪಠ್ಯದ ಜೊತೆಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ನಿಮ್ಮ ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಂಡು ಜೀವನದಲ್ಲಿ ಪ್ರಗತಿ ಕಾಣಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರುಗಳಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ ಒಡೆಯರ್, ಪ್ರೊ. ಸೈಯ್ಯದ್ ಮತೀನ್ ಮುಲ್ಲಾ ಸೇರಿದಂತೆ ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೊ. ಎಸ್.ಎಸ್. ವಜ್ರಬಂಡಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಪ್ರೊ. ಹೇಮಂತ ದಳವಾಯಿ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ. ಸಂಗೀತಾ ಬೀಳಗಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here