ನವದೆಹಲಿ: ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ.
Advertisement
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಪಕ್ಷಕ್ಕಾಗಿ ದುಡಿದವರು ಅಲ್ಲಿದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.