ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಪ್ರೀತಿ ಹೆಸರಿನಲ್ಲಿ ವಂಚನೆ ಮತ್ತು ಕೊಲೆ ಯತ್ನದ ಆರೋಪ ಕೇಳಿಬಂದಿದೆ.
ಯುವತಿ ನೀಡಿದ ದೂರಿನ ಪ್ರಕಾರ, ಆರೋಪಿ ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದು, ನಂತರ ಮದುವೆಗೆ ನಿರಾಕರಿಸಿದ್ದಾರೆ. ಆತನ ಜೊತೆಗಿನ ವೈಯಕ್ತಿಕ ಫೋಟೋಗಳಿರುವ ಮೊಬೈಲ್‌ಗಳನ್ನು ಕೂಡ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮದುವೆಗೆ ಒತ್ತಾಯಿಸಿದಾಗ, ಇಬ್ಬರೂ ವಿಷ ಸೇವಿಸೋಣ ಎಂದು ಹೇಳಿ ಯುವತಿಗೆ ಮಾತ್ರ ವಿಷ ನೀಡಿ ಕೊಲೆ ಯತ್ನ ಮಾಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಇದೀಗ ಆರೋಪಿ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಮಾಹಿತಿ ಹೊರಬಂದಿದ್ದು, ಪೊಲೀಸರು ಆರೋಪಿ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.



