HomeKarnataka Newsಮಗಳ ಅಪಹರಣ ಆರೋಪದಲ್ಲಿ ಅಳಿಯ ವಿರುದ್ಧ ದೂರು: ಕಾನೂನು ದುರ್ಬಳಕೆ ಎಂದ ಹೈಕೋರ್ಟ್

ಮಗಳ ಅಪಹರಣ ಆರೋಪದಲ್ಲಿ ಅಳಿಯ ವಿರುದ್ಧ ದೂರು: ಕಾನೂನು ದುರ್ಬಳಕೆ ಎಂದ ಹೈಕೋರ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಮಗಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಅಳಿಯನ ವಿರುದ್ಧ ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣವನ್ನು “ಕಾನೂನು ದುರ್ಬಳಕೆಯ ಸ್ಪಷ್ಟ ಉದಾಹರಣೆ” ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಅಳಿಯ ಹಾಗೂ ಆತನ ಗೆಳೆಯನನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದೆ.

ಕೋಲಾರ ತಾಲೂಕಿನ ಬೆಳಮಾರನಹಳ್ಳಿ ನಿವಾಸಿಗಳಾದ ಬಿ.ಎನ್. ಮುರಳಿ ಮತ್ತು ಚರಣ್ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ಹಾಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು.

ದೂರುದಾರೆಯಾದ ಅತ್ತೆ, ತನ್ನ ಮಗಳನ್ನು ಅಳಿಯ ಅಪಹರಿಸಿದ್ದಾನೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಆದರೆ, ಮುರಳಿ ಮತ್ತು ದೂರುದಾರೆಯ ಮಗಳು ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದು, ಯುವತಿ ಸ್ವಇಚ್ಛೆಯಿಂದ ಮನೆಬಿಟ್ಟು ಹೋಗಿದ್ದಾಳೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಯುವತಿಗೆ 18 ವರ್ಷ ಮೀರಿದೆ ಎಂಬುದನ್ನೂ ಸ್ಪಷ್ಟಪಡಿಸಿದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಈ ಪ್ರಕರಣವು ಕಾನೂನು ದುರ್ಬಳಕೆಗೆ ಸ್ಪಷ್ಟ ಉದಾಹರಣೆ ಎಂದು ಅಭಿಪ್ರಾಯಪಟ್ಟಿತು. ಪರಸ್ಪರ ಒಪ್ಪಿಗೆಯ ಮೇರೆಗೆ ನಡೆದ ಮದುವೆಯ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಸೂಚಿಸಿತು. ಇದು ಜಾಮೀನು ಪಡೆಯಬಹುದಾದ ಪ್ರಕರಣವಾಗಿದ್ದು, ಇಂತಹ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದು ಯುಕ್ತಿಯುತವಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಅರ್ಜಿದಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಜೈಲಾಧಿಕಾರಿಗಳಿಗೆ ನಿರ್ದೇಶಿಸಿದೆ. ಈ ತೀರ್ಪು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಕಾನೂನು ಪ್ರಕ್ರಿಯೆಯ ದುರ್ಬಳಕೆಯ ಬಗ್ಗೆ ಮಹತ್ವದ ಸಂದೇಶ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!