ಕೋಮು ಪ್ರಚೋದನೆ ಭಾಷಣ ಆರೋಪ: ಆಂದೋಲಾ ಶ್ರೀ ವಿರುದ್ಧ ದೂರು ದಾಖಲು

0
Spread the love

ಕಲಬುರಗಿ: ಹಿಂದೂ-ಮುಸ್ಲಿಂ ಮಧ್ಯೆ ಕೋಮುದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆಂದು ಆರೋಪಿಸಿ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಆಂದೋಲದ ಸಿದ್ಧಲಿಂಗ ಸ್ವಾಮೀಜಿ, ಹಿಂದೂ-ಮುಸ್ಲಿಂ ಮಧ್ಯೆ ಕೋಮುದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ.

ಅಲ್ಲದೇ, ಸಿಎಂ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು,

ಕಲಬುರಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಹೀಯಾಳಿಸಿ ಮಾತನ್ನಾಡಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಶರಣು ಪಾಟೀಲ್ ಅವರ ದೂರಿನ ಮೇರೆಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here