ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು

0
Spread the love

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಆಡಳಿತ ಪಕ್ಷದ ಶಾಸಕರೇ ಪ್ರತಿಭಟನೆ ನಡೆಸಿದ್ದರು. ಈ ವೇಳೆ ತಮ್ಮ ವಿರುದ್ಧ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು ಹಾಕಿದ್ದಾರೆ.

Advertisement

ವಿಧಾನಪರಿಷತ್ ಕಲಾಪದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ಮಾತಿಗೆ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಅರ್ಧ ಗಂಟೆಗಳ‌ ಕಾಲ‌ ಮುಂದೂಡಿಕೆ ಮಾಡಿದ್ದಾರೆ. ಅಶ್ಲೀಲ ಪದ ಬಳಕೆ ನೊಂದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಮುಂದೆ ಕಣ್ಣೀರಿಟ್ಟಿದ್ದಾರೆ.

ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಅಷ್ಟು ಆಡಿಯೋ, ವಿಡಿಯೋ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ಬಸವರಾಜ ಹೊರಟ್ಟಿ ಅವರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದು, ಸಿ.ಟಿ ರವಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಅಮಾನತಿಗೆ ಆಗ್ರಹಿಸಲು ಕಾಂಗ್ರೆಸ್ ಸದಸ್ಯರು ಮನವಿ ಮಾಡಲಿದ್ದಾರೆ.

 


Spread the love

LEAVE A REPLY

Please enter your comment!
Please enter your name here